ಪ್ರಶ್ನೆ: ಅಮ್ಮಾ, ಬಹಳ ವರ್ಷಗಳಿಂದ ಸಾಧನೆ ಮಾಡುತ್ತಿದ್ದೇನೆ; ಆದರೂ ಯಾವೊಂದು ತರದ ಅನುಭವವೂ ಆಗಿಲ್ಲ. “ಅಮ್ಮನನ್ನು ಕಾಣಲು ಬರುವ ಮಕ್ಕಳಲ್ಲಿ ಹಲವರು ಹೇಳುವ ಮಾತಿದು. ಗೃಹಸ್ಥಾಶ್ರಮಿ ಮಕ್ಕಳೂ ಹೇಳುತ್ತಾರೆ, ’ನಾವು ಎಷ್ಟೆಲ್ಲ ಧ್ಯಾನ ಮಾಡಿಯೂ, ಜಪ ಮಾಡಿಯೂ ದೊಡ್ಡ ಪ್ರಯೋಜನವೇನೂ ಆದ ಹಾಗೆ ಅನಿಸುವುದಿಲ್ಲ.’ ಎಂದು. ಮಕ್ಕಳೇ, ದೇವರನ್ನು ಪ್ರಾರ್ಥಿಸಲು, ಭಕ್ತಿಯಿಂದ ದೇವಸ್ಥಾನಕ್ಕೆ ಹೋಗುವೆವು. ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ ಪ್ರಾರ್ಥಿಸುತ್ತೇವೆ. ಮೂರ್ತಿಯೆದುರಿಗೆ ಕೈಜೋಡಿಸಿ ನಿಂತಿರುವಾಗ ನಮ್ಮೆದುರಿಗೆ ಯಾವನಾದರೂ ಬಂದು ನಿಂತುಕೊಂಡರೆ, ನಮ್ಮ ಚರ್ಯೆ ಬದಲಾಗುತ್ತದೆ. […]
Category / ಅಮ್ಮನ ಸಂದೇಶ
ನಿಷ್ಕಾಮ ಸೇವೆಯಿಂದಾಗಿ ನಮಗೆಯೇ ಆನಂದ. ಅನೇಕ ದಿನಗಳಿಂದ ಉಪವಾಸವಿರುವ ಮನೆ; ಹಸಿವೆಯಿಂದ ಮಕ್ಕಳಿಗೆ ಕೂಗಲೂ ತ್ರಾಣವಿಲ್ಲದಾಗಿದೆ. ತಂದೆ ತಾಯಿ ಸೇರಿ ತಿರುಪೆ ಎತ್ತಲಿಕ್ಕೆ ತೊಡಗಿದರು. ಸಿಗುವ ಆಹಾರವೋ ಬಹಳ ಕಮ್ಮಿ. ಮಕ್ಕಳಿಗೆ ಏನೂ ಸಾಲದು. ಅದನ್ನು ಅವರು ಮಕ್ಕಳಿಗೆ ಹಂಚುತ್ತಾರೆ. ತಮ್ಮ ಮಕ್ಕಳು ಅದನ್ನು ಉಣ್ಣುವುದನ್ನು ನೋಡುವಾಗ ಆ ತಂದೆಗೂ ತಾಯಿಗೂ ಅರ್ಧ ಹೊಟ್ಟೆ ತುಂಬುವುದು. ಈ ತೆರನ ಒಂದು ಹೊಣೆಗಾರಿಕೆಯನ್ನು ನಾವು ಜಗತ್ತಿನಲ್ಲಿ ಸೃಷ್ಟಿಸಬೇಕು. ನಮಗೆಯೇ ಅದರಿಂದ ಆನಂದವಾಗುವುದು. ಹೂವನ್ನು ದೇವರಿಗೆ ಕೊಯ್ಯುವಾಗ ಅದರ ಸುಗಂಧವನ್ನೂ […]
ಮಕ್ಕಳೇ, ಆಧಾರಸ್ತಂಭಗಳಿಲ್ಲದೆ ಕಟ್ಟಡ ಕಟ್ಟಬಹುದೆಂದು ಒಂದು ವೇಳೆ ವಿಜ್ಞಾನಿಗಳು ಕಂಡುಹಿಡಿದರೆಂದು ಇಟ್ಟುಕೊಳ್ಳೋಣ; ಇಂದು ಬಟನ್ ಅದುಮಿದರೆ ಈ ಪ್ರಪಂಚವೇ ಅಳಿದು ಹೋಗುತ್ತದೆಂದು ಇಟ್ಟುಕೊಳ್ಳೋಣ. ಆದರೆ ಇದರಿಂದ ಯಾವ ಮನಸ್ಸಿಗೂ ಯಾವ ಕುಟುಂಬಕ್ಕೂ ಸಮಾಧಾನವೆಂಬುದು ಸಿಗುವುದಿಲ್ಲ. ಹೊಟ್ಟೆ ತುಂಬ ಊಟ ಮಾಡಿಯೂ ’ಮನಸ್ಸಿಗೆ ಸಮಾಧಾನವಿಲ್ಲ, ನಿದ್ದೆ ಬರುತ್ತಿಲ್ಲ’ ಎನ್ನುವ ಮೊರೆಯನ್ನು ಮಾತ್ರವೇ ಇಂದು ನಾವು ಕೇಳುತ್ತಿರುವುದು. ಒಂದು ಕೋಟಿಗೂ (ಇದು 1987ರ ಮೊದಲಿನ ವರ್ಷಗಳಲ್ಲಿ ಅಮ್ಮ ಹೇಳಿದ ಮಾತು) ಮೀರಿ ಜನಗಳನ್ನು ಅಮ್ಮ ಇಷ್ಟು ಕಾಲದಿಂದ ಕಂಡು ಭೇಟಿಯಾಗಿದ್ದಾರೆ. […]
ಪರಮಕರುಣಾಕರನಾದ ಪರಮಾತ್ಮನ ಅನುಗ್ರಹದಿಂದ ನಾವು ನಡೆದುಕೊಂಡು ಬರುತ್ತಿದ್ದೇವೆ. ಕೆಲವರು ಹೇಳುತ್ತಾರೆ ದೇವರಿಲ್ಲ ಎಂದು. ತನ್ನ ನಾಲಿಗೆಯಿಂದಲೇ “ನನಗೆ ನಾಲಿಗೆಯಿಲ್ಲ” ಎಂದು ಹೇಳಿದಂತಾಯಿತು ಇದು. ನಾಲಗೆಯಿಲ್ಲದ ಒಬ್ಬನಿಗೆ “ನನಗೆ ನಾಲಿಗೆಯಿಲ್ಲ” ಎಂದು ಹೇಳಲು ಸಾಧ್ಯವಿದೆಯೇ. ಇದೇ ರೀತಿ ದೇವರಿಲ್ಲ ಎಂದು ಹೇಳುವಾಗಲೇ ನಾವು ದೇವರಿದ್ದಾನೆ ಎಂದು ಒಪ್ಪಿದ ಹಾಗಾಯಿತು. ಯಾಕೆಂದರೆ ಒಂದು ವಸ್ತು ಇಲ್ಲಾಂತ ಹೇಳಬೇಕಾದರೆ, ಮೊದಲೇ ಅದರ ಬಗ್ಗೆ ನಮಗೆ ಸ್ವಲ್ಪ ತಿಳುವಳಿಕೆ ಇರಬೇಕಾಗುತ್ತದೆ. ಪ್ರೀತಿಯ ಮಕ್ಕಳೇ, ನಾವು ಬಂದಿರುವುದು ದೇವರಿಂದ. ಆ ಮಸುಕಾದ ಪರಿವೆ ನಮ್ಮೊಳಗಿದೆ; […]
ಮಕ್ಕಳೇ, ಕಲಿಯುತ್ತಿರುವಕಾಲದಲ್ಲಿ ಹುಡುಗರಿಗೆ ಲಕ್ಷ್ಯಬೋಧವಿದ್ದರೂ ಅವರ ಮನಸ್ಸು ಹೆಚ್ಚಾಗಿ ಆಟಗಳಲ್ಲೂ, ಇನ್ನಿತರ ಆಮೋದ ಪ್ರಮೋದಗಳಲ್ಲೂ ಇರುತ್ತದೆ. ಆ ಕಾಲಘಟ್ಟದಲ್ಲಿ ತಂದೆಯೂ ತಾಯಿಯೂ ಬೈತಾರೆ. ಓದಿಕೊಂಡು ಹೋಗದಿದ್ದರೆ ಸರ್ ಹೊಡೆಯುತ್ತಾರಂತ ಹೆದರಿಕೆಯಿಂದ ಮಾತ್ರವೇ ಅವರು ಕಲಿಯುವುದು. ಆದರೆ ಹತ್ತನೇ ಕ್ಲಾಸ್ ಪಾಸಾದ ಮೇಲೆ, “ನನಗೆ ಎಂ.ಬಿ.ಬಿ.ಎಸ್.ಗೆ ಹೋಗಬೇಕು, ರ್ಯಾಂಕ್ ತೆಗೆದು ಪಾಸಾಗಬೇಕು” ಎಂಬ ಪರಿಜ್ಞಾನ ಬರುವುದು. ಆಗ ಅವರು ಚೆನ್ನಾಗಿ ಓದುತ್ತಾರೆ. ಯಾರು ಬಯ್ಯದೆಯೂ ಹೊಡೆಯದೆಯೂ ವಿದ್ಯಾಭ್ಯಾಸಕ್ಕೆ ಗಮನಕೊಡುತ್ತಾರೆ. ಸಿನೆಮ ನೋಡಲು ಹೋಗುವುದಿಲ್ಲ; ಹೆಚ್ಚು ನಿದ್ದೆ ಮಾಡುವುದಿಲ್ಲ. ಆದರೆ […]

Download Amma App and stay connected to Amma