Category / ಅಮ್ಮನ ಸಂದೇಶ

ಆಕಾಶದಲ್ಲಿರುವ ಒಂದು ದೇವರನ್ನು ಕುರಿತೋ, ಪಾತಾಳದಲ್ಲ್ಲಿರುವ ಒಂದು ದೇವಿಯ ಬಗ್ಗೆಯೋ ಅಲ್ಲ ಅಮ್ಮ ಹೇಳುತ್ತಿರುವುದು. ಎಲ್ಲರಲ್ಲೂ ದೇವರಿದ್ದಾನೆ. ಆದರೆ ನೀವು ಆ ಚೈತನ್ಯವನ್ನು ದುರ್ವಿನಿಯೋಗ ಮಾಡುತ್ತಿದ್ದೀರಿ. ನೀವಿಂದು ಸೊನ್ನೆ ವ್ಯಾಟ್ಟಿನ ಬಲ್ಬಾಗಿದ್ದರೆ, ತಪಸ್ಸಿನಿಂದ ಅದನ್ನು ಸಾವಿರದ್ದನ್ನಾಗಿ ಮಾರ್ಪಡಿಸಲು ಸಾಧ್ಯವಿದೆ. ಒಬ್ಬ ಸಾಮನ್ಯ ವ್ಯಕ್ತಿ ಇಬ್ಬರನ್ನು ಪ್ರೇಮಿಸಲೂ, ಸೇವಿಸಲೂ ಸಾಧ್ಯವಾದರೆ ನಿಮಗೆ ಕೋಟಿ ಜನರನ್ನು ಪ್ರೇಮಿಸಲೂ, ಸೇವಿಸಲೂ ಸಾಧ್ಯವಿದೆ. ನಿಮ್ಮ ಶಕ್ತಿಯಲ್ಲಿ ಯಾವೊಂದು ಕೊರತೆಯೂ ಉಂಟಾಗುವುದಿಲ್ಲ. ಆದಕಾರಣ ನಿಮ್ಮಲ್ಲಿರುವ ಶಕ್ತಿಯನ್ನು ವೃದ್ಧಿಸಿ, ನೀವು ನಿಮ್ಮೊಳಗೆ ಹೋಗಿರಿ. ಇಂದು ಸಮಾಜ […]

ಆಕಾಶ ಮೀರಿದ ಯಾವುದೇ ಮರ ಇಲ್ಲ, ಪಾತಾಳ ಮೀರಿದ ಯಾವುದೇ ಬೇರೂ ಇಲ್ಲ. ರೂಪಗಳಿಗೆಲ್ಲ ಒಂದು ಮೇರೆಯಿದೆ. ಅದಕ್ಕೂ ಆಚೆ ನಾವು ತಲಪಬೇಕಾದದ್ದು. ಅದಕ್ಕೊಂದು ಉಪಾಧಿ ಬೇಕು. ನಾವು ತೆಂಗಿನಮರ ಹತ್ತಬೇಕಾದರೆ ಏಣಿ ಬೇಕು. ಅದೇ ಕಸಬಿನವರಿಗೆ ಏಣಿ ಬೇಡ. ಅವತಾರಗಳು ಪೂರ್ಣರಾಗಿಯೇ ಬರುತ್ತಾರೆ. ಅವರಿಗೆ ಯಮ ನಿಯಮಗಳು ಬೇಕೆಂದಿಲ್ಲ. ಅವರು ಆ ಸಂಸ್ಕಾರದಿಂದ ಬಂದಿರುತ್ತಾರೆ. ನಾವು ಹಾಗೆ ಮಾಡಬೇಕು ಮಕ್ಕಳೇ. ನಾವು ಯಾಕಾಗಿ ಧ್ಯಾನ ಮಾಡುತ್ತೇವೋ ಅದು ಸಿದ್ಧಿಸಿಯೇ ತೀರುತ್ತದೆ. ಕುಂಕುಮ ಕಲೆಸಿದ ಒಂದು ಪಾತ್ರೆಯಲ್ಲಿ […]

ಮಕ್ಕಳೇ, ಮಂದಬುದ್ಧಿಯವರು ಕೂಡ ಗುರಿಯಿಲ್ಲದೆ ಸಾಗುವುದಿಲ್ಲ. ಲೌಕಿಕ ಗುರಿಯು ಎಲ್ಲರಿಗೂ ಇರುತ್ತದೆ. ಆದರೆ ಅವೊಂದೂ ನಮಗೆ ಪೂರ್ಣತೆ ನೀಡುವುದಿಲ್ಲ. ಆದಕಾಆರಣ ದೇವರನ್ನೇ ಗುರಿಯಾಗಿಟ್ಟು ಮುಂದಕ್ಕೆ ಸಾಗಿರಿ. ಮಕ್ಕಳೇ, ದೇವರೆಲ್ಲಿ ಎಂದು ಕೇಳಬಹುದು. ಹುಡುಕಿರಿ, ನಿಶ್ಚಯವಾಗಿಯೂ ಕಾಣಿಸುತ್ತಾನೆ. ನಾವು ಅನ್ನುತ್ತೇವೆ, “ಕಾಣದಿರುವುದನ್ನು ನಂಬುವುದಿಲ್ಲ” ಎಂದು. ಅಜ್ಜನನ್ನು ಕೆಲವು ಚಿಕ್ಕಮಕ್ಕಳು ನೋಡಿರುವುದಿಲ್ಲ ಎಂದಿಟ್ಟುಕೊಳ್ಳೋಣ. ಅವರು ಅಪ್ಪನನ್ನು “ತಂದೆಯಿಲ್ಲದವನು” ಎಂದೇನು ಕರೆಯುವುದು? ಭಗವಂತನು ಸರ್ವವ್ಯಾಪಿ. ಅವನು ಎಲ್ಲದರಲ್ಲೂ ನೆಲೆನಿಂತಿರುವನು. ಸೆಗಣಿಯನ್ನು ಉಪಯೋಗಿಸಬೇಕಾದ ರೀತಿಯಲ್ಲಿ ಉಪಯೋಗಿಸಿದಾಗ ಅದರಲ್ಲಿ ಅಡಕವಾಗಿರುವ ಶಕ್ತಿಯಿಂದ ಬೆಂಕಿ ಹತ್ತಿಕೊಳ್ಳುತ್ತದೆ. […]

27 ಸೆಪ್ಟಂಬರ್, 2010 ದುರಸ್ತಿಯ “ಶುಚಿತ್ವವೇ ದಿವ್ಯತ್ವವು. ಪ್ರಕೃತಿದತ್ತವಾದ ಯಾವೊಂದನ್ನೂ ಅಂದಗೊಳಿಸುವುದರಲ್ಲಿ ಅರ್ಥವಿಲ್ಲ. ಅದಕ್ಕೆ ನಿರ್ವಹಣೆಯ ಅಗತ್ಯವಿಲ್ಲ. ಕಾಡಿಗೂ ಕಡಲಿಗೂ ಮಲೆಗಳಿಗೂ ನದಿಗಳಿಗೂ ನಿಸರ್ಗದತ್ತವಾದ ಸೌಂದರ್ಯವಿದೆ. ಅದೊಂದನ್ನೂ ಗುಡಿಸಿ ಸಾರಿಸಿ ಸ್ವಚ್ಚವಾಗಿಡುವ ಅವಶ್ಯಕತೆಯಿಲ್ಲ. ಮನುಷ್ಯನೇ ಅವೆಲ್ಲವುಗಳನ್ನು ಮಲಿನಗೊಳಿಸುವುದು. ಆದರೂ ಮನುಷ್ಯ ಸೃಷ್ಟಿಸಿದ್ದೆಲ್ಲವನ್ನೂ ದಿನಾಲೂ ಶುಚಿಯಾಗಿಡಬೇಕು. ದುರಸ್ತಿ ಮಾಡಬೇಕು. ಆದರೆ ನಮ್ಮ ಸಾರ್ವಜನಿಕ ಸ್ಥಳಗಳನ್ನೂ ಅಲ್ಲಿರುವ ಮೂತ್ರಾಲಯಗಳನ್ನೂ ಕಕ್ಕಸುಗಳನ್ನೂ ನಮ್ಮ ರಸ್ತೆಗಳನ್ನೂ ನಾವು ಸರಿ ಸುಮಾರು ಪೂರ್ಣವಾಗಿಯೆ ಅವಗಣಿಸಿದಂತಿದೆ. ಶುಚಿಹೀನತೆಯ ಹೆಸರಲ್ಲಿ, ನಾವು ನಮ್ಮ ದೇಶಕ್ಕೆ ಮಾಡಿರುವ ಅಪಮಾನ […]

ನಾವೊಂದು ಒಂಟಿ ದ್ವೀಪವಲ್ಲ. ಒಂದೇ ಸರಪಳಿಯ ಕೊಂಡಿಗಳು ನಾವು. ನಾವು ಮಾಡುವ ಒಂದೊಂದು ಕೃತಿಯೂ, ತಿಳಿದೋ ತಿಳಿಯದೆಯೋ ಇತರರ ಮೇಲೆ ಪರಿಣಾಮ ಬೀರುತ್ತದೆ. ಈ ಜಗತ್ತಿನಲ್ಲಿ ನಡೆದಿರುವ ಎಲ್ಲ ಯುದ್ಧಗಳೂ, ಯಾವನೋ ಒಬ್ಬ ಮನುಷ್ಯನೊಳಗೆ ಮೂಡಿದ ವಿದ್ವೇಷದ ಫಲ. ಒಬ್ಬ ವ್ಯಕ್ತಿಯ ಆಲೋಚನೆ, ನಡತೆ ಎಷ್ಟೋ ಜನಗಳನ್ನು ನಾಶ ಮಾಡಿತು. ಹಿಟ್ಲರ್ ಒಬ್ಬ ವ್ಯಕ್ತಿ. ಆದರೆ ಅವನ ಕೃತಿ ಬಾಧಿಸಿದ್ದು ಎಷ್ಟೆಲ್ಲ ಜನರನ್ನು! ನಮ್ಮ ಆಲೋಚನೆ ಇತರರನ್ನೂ, ಇತರರ ಆಲೋಚನೆ ನಮ್ಮನ್ನೂ ಬಾಧಿಸುತ್ತವೆ ಎಂದರಿತು, ಎಂದಿಗೂ ಒಳ್ಳೆಯ […]