ಮಕ್ಕಳೇ, ಆಧಾರಸ್ತಂಭಗಳಿಲ್ಲದೆ ಕಟ್ಟಡ ಕಟ್ಟಬಹುದೆಂದು ಒಂದು ವೇಳೆ ವಿಜ್ಞಾನಿಗಳು ಕಂಡುಹಿಡಿದರೆಂದು ಇಟ್ಟುಕೊಳ್ಳೋಣ; ಇಂದು ಬಟನ್ ಅದುಮಿದರೆ ಈ ಪ್ರಪಂಚವೇ ಅಳಿದು ಹೋಗುತ್ತದೆಂದು ಇಟ್ಟುಕೊಳ್ಳೋಣ. ಆದರೆ ಇದರಿಂದ ಯಾವ ಮನಸ್ಸಿಗೂ ಯಾವ ಕುಟುಂಬಕ್ಕೂ ಸಮಾಧಾನವೆಂಬುದು ಸಿಗುವುದಿಲ್ಲ. ಹೊಟ್ಟೆ ತುಂಬ ಊಟ ಮಾಡಿಯೂ ’ಮನಸ್ಸಿಗೆ ಸಮಾಧಾನವಿಲ್ಲ, ನಿದ್ದೆ ಬರುತ್ತಿಲ್ಲ’ ಎನ್ನುವ ಮೊರೆಯನ್ನು ಮಾತ್ರವೇ ಇಂದು ನಾವು ಕೇಳುತ್ತಿರುವುದು. ಒಂದು ಕೋಟಿಗೂ (ಇದು 1987ರ ಮೊದಲಿನ ವರ್ಷಗಳಲ್ಲಿ ಅಮ್ಮ ಹೇಳಿದ ಮಾತು) ಮೀರಿ ಜನಗಳನ್ನು ಅಮ್ಮ ಇಷ್ಟು ಕಾಲದಿಂದ ಕಂಡು ಭೇಟಿಯಾಗಿದ್ದಾರೆ. […]