ಪ್ರಶ್ನೆ: ಅಮ್ಮಾ, ಧ್ಯಾನ ಹೇಗೆ ಮಾಡಬೇಕು ? “ಮಕ್ಕಳೇ, ಧ್ಯಾನ ಅಂತ ನಾವು ಹೇಳುವಂತಿಲ್ಲ. ಧ್ಯಾನವೆನ್ನುವುದು ಅಡೆತಡೆಯಿಲ್ಲದೆ ಒಂದೇ ಕಡೆ ಮನಸ್ಸನ್ನು ನಿಲ್ಲಿಸಲು ಸಾಧ್ಯವಾಗುವ ಸ್ಥಿತಿ. ಆ ಸ್ತರ ಮುಟ್ಟಲು ನಾವು ಸಾಧನೆ ಮಾಡುತ್ತಿರುವುದು. ಪಾಯಸ ಮಾಡಲು ನಾವು ನೀರನ್ನು ಒಲೆಯಲ್ಲಿಡುತ್ತೇವೆ. ಏನು ಮಾಡುತ್ತೀಯೆಂದು ಯಾರಾದರೂ ಕೇಳಿದರೆ ಹೇಳುತ್ತೇವೆ ಪಾಯಸ ಮಾಡುತ್ತೇನೆಂದು. ಇದೇ ಪ್ರಕಾರ, ಧ್ಯಾನಾವಸ್ಥೆ ತಲಪಲು ಬೇಕಾದ ಅಭ್ಯಾಸ ಬರೇ ಆರಂಭ ಮಾಡಿರುವುದು ಮಾತ್ರ. ಆದರೂ ನಾವು ಹೇಳುತ್ತೇವೆ ಧ್ಯಾನ ಮಾಡುತ್ತೇವೆಂದು. ಈ ಅಭ್ಯಾಸವನ್ನೇ ಸಾಮಾನ್ಯವಾಗಿ […]