ನಿಮ್ಮ ದಿನದಲ್ಲಿ ಇಪ್ಪತ್ತನಾಲ್ಕು ಗಂಟೆಗಳಿದೆ. ಒಂದು ಗಂಟೆ ದೈವೀ ವಿಚಾರಗಳಿಗೆ ಮೀಸಲಿಡಿರಿ. ಜೋರಾಗಿ ಅಳುತ್ತ ಅರ್ಧ ಗಂಟೆ ಪ್ರಾರ್ಥನೆ ಮಾಡಿದರೆ ಸಾಕು, ದೇವರ ಕೃಪೆ ನಿಮ್ಮನ್ನು ಬಂದು ತಲಪುವುದು. ಏಕಾಗ್ರತೆ ಬೇಕು; ಭಕ್ತಿ ಬೇಕು. ಈ ಕಲಿಯುಗದಲ್ಲಿ ನಾಮ ಜಪ ಸುಲಭ. ಮನಕರಗುವ ಭಜನೆಯು ಎಷ್ಟೋ ಒಳ್ಳೆಯ ಸಾಧನಾಮಾರ್ಗ. ______________ ತಳಪಾಯ ಚೆನ್ನಾಗಿ ಗಟ್ಟಿಯಾಗಿದ್ದರೆ ಮಾತ್ರವೇ ಕಟ್ಟಡ ಮೇಲೆಬ್ಬಿಸಲು ಸಾಧ್ಯ; ಬಹಳ ಕೆಳಗಿದ್ದರೆ ಮಾತ್ರವೇ ಏರಲು ಸಾಧ್ಯ. ______________ ಕಾಮವನ್ನು ಹೋಗಲಾಡಿಸುವುದು ಬಹಳ, ಬಹಳ ಕಷ್ಟ. ರಾಮನು […]