ಪರಮಕರುಣಾಕರನಾದ ಪರಮಾತ್ಮನ ಅನುಗ್ರಹದಿಂದ ನಾವು ನಡೆದುಕೊಂಡು ಬರುತ್ತಿದ್ದೇವೆ. ಕೆಲವರು ಹೇಳುತ್ತಾರೆ ದೇವರಿಲ್ಲ ಎಂದು. ತನ್ನ ನಾಲಿಗೆಯಿಂದಲೇ “ನನಗೆ ನಾಲಿಗೆಯಿಲ್ಲ” ಎಂದು ಹೇಳಿದಂತಾಯಿತು ಇದು. ನಾಲಗೆಯಿಲ್ಲದ ಒಬ್ಬನಿಗೆ “ನನಗೆ ನಾಲಿಗೆಯಿಲ್ಲ” ಎಂದು ಹೇಳಲು ಸಾಧ್ಯವಿದೆಯೇ. ಇದೇ ರೀತಿ ದೇವರಿಲ್ಲ ಎಂದು ಹೇಳುವಾಗಲೇ ನಾವು ದೇವರಿದ್ದಾನೆ ಎಂದು ಒಪ್ಪಿದ ಹಾಗಾಯಿತು. ಯಾಕೆಂದರೆ ಒಂದು ವಸ್ತು ಇಲ್ಲಾಂತ ಹೇಳಬೇಕಾದರೆ, ಮೊದಲೇ ಅದರ ಬಗ್ಗೆ ನಮಗೆ ಸ್ವಲ್ಪ ತಿಳುವಳಿಕೆ ಇರಬೇಕಾಗುತ್ತದೆ. ಪ್ರೀತಿಯ ಮಕ್ಕಳೇ, ನಾವು ಬಂದಿರುವುದು ದೇವರಿಂದ. ಆ ಮಸುಕಾದ ಪರಿವೆ ನಮ್ಮೊಳಗಿದೆ; […]