ಪ್ರಶ್ನೆ: ಸಾಧಕನು ಸಿಟ್ಟಾಗಬಾರದೆಂದು ಹೇಳುವುದು ಏತಕ್ಕಾಗಿ? “ನಲ್ಮೆಯ ಮಕ್ಕಳೇ, ಒಬ್ಬ ಆಧ್ಯಾತ್ಮಿಕ ಜೀವಿಯು ಎಂದೂ ಕೋಪ ಮಾಡಬಾರದು. ಕೋಪವು ನಾವು ಸಾಧನೆಯ ಮೂಲಕ ಗಳಿಸಿದ ಶಕ್ತಿಯನ್ನು ನಷ್ಟಪಡಿಸುವುದು. ಗಾಡಿ ಓಡುತ್ತಿರಬೇಕಾದರೆ ಪೆಟ್ರೋಲ್ ಅಷ್ಟಾಗಿ ಖರ್ಚಾಗುವುದಿಲ್ಲ; ಆದರೆ ಬ್ರೇಕ್ ಅದುಮಿದಾಗ ಹೆಚ್ಚು ಖರ್ಚಾಗುತ್ತದೆ. ಇದೇ ರೀತಿ ಮಕ್ಕಳೇ, ಕೋಪ ಬಂದಾಗ. ಕೋಪ ಬಂದಾಗ ಬರೇ ಬಾಯಿಯಿಂದ ಮಾತ್ರವಲ್ಲ, ಪ್ರತಿಯೊಂದು ರೋಮ ಕೂಪದಿಂದಲೂ ಶಕ್ತಿಯ ವ್ಯಯವಾಗುತ್ತದೆ. ಒಂದು ಸಿಗರೇಟು ಲೈಟರನ್ನೂ ಹತ್ತಿಪ್ಪತ್ತು ಬಾರಿ ಅದುಮಿದರೆ ಅದರ ಪೆಟ್ರೋಲ್ ನಷ್ಟವಾಗುತ್ತದೆ. ಆದರೆ […]