ಪ್ರಶ್ನೆ: ಮಾತುಗಳಿಂದ ಮನುಷ್ಯನ ಸ್ವಭಾವ ಬದಲಿಸಲು ಸಾಧ್ಯವೇ ? “ಖಂಡಿತವಾಗಿಯೂ ಸಾಧ್ಯ. ಮಕ್ಕಳೇ, ಒಮ್ಮೆ ಒಂದು ದೇವಾಲಯದಲ್ಲಿ ಒಬ್ಬ ಬ್ರಾಹ್ಮಣನು ಕೆಲವು ಹುಡುಗರಿಗೆ ಆಧ್ಯಾತ್ಮಿಕ ಕಲಿಸುತಿದ್ದನು. ಆಗ ಆ ರಾಜ್ಯದ ರಾಜನು ಅಲ್ಲಿ ಬಂದು ಮುಟ್ಟಿದ. ಮಕ್ಕಳಿಗೆ ಕಲಿಸುವುದರಲ್ಲೇ ಮಗ್ನನಾಗಿದ್ದ ಬ್ರಾಹ್ಮಣನಿಗೆ ರಾಜನು ಬಂದದ್ದು / ಬಂದಿರುವುದು ಗೊತ್ತಾಗಲಿಲ್ಲ. ರಾಜನಿಗೆ ಕೋಪ ಬಂದು ಬ್ರಾಹ್ಮಣನಲ್ಲಿ ಕೇಳಿದ, “ಯಾಕಾಗಿ ನಾನು ಬಂದಾಗ ನೀವು ಗಮನಿಸದಿರುವುದು ?” “ನಾನು ಮಕ್ಕಳಿಗೆ ಓದಿಸುತ್ತಾ ಇದ್ದೆ. ಹಾಗಾಗಿ ತಾವು ಬಂದಿದ್ದು ನೋಡಲಿಲ್ಲ,” ಎಂದು […]