ಪ್ರಶ್ನೆ: ಅಮ್ಮನಿಗೇಕೆ ಈ ವೇಷ ?* ಶಂಕರಾಚಾರ್ಯರೂ, ಶ್ರೀ ರಾಮಕೃಷ್ಣರೂ, ಚಟ್ಟಾಂಬಿ ಸ್ವಾಮಿಗಳೂ, ನಾರಾಯಣ ಗುರುಗಳೂ,** ಮತ್ತಿತರರೂ ಇಷ್ಟೆಲ್ಲ ವಸ್ತ್ರಧರಿಸಿ ಅಲಂಕರಿಸಿ ಕೊಂಡಿರಲಿಲ್ಲವಲ್ಲ ? “ಮಕ್ಕಳೇ, ಹಾಗಿದ್ದ ಮೇಲೆ ಶಂಕರಾಚಾರ್ಯರು ಮಾತ್ರ ಸಾಕಾಗಿತ್ತಲ್ಲ ಲೋಕವನ್ನು ಉದ್ಧರಿಸಲು ? ಒಬ್ಬರ ಹಾಗೆ ಇನ್ನೊಬ್ಬರಿಲ್ಲ. ಶ್ರೀ ರಾಮನ ಹಾಗಿರಲಿಲ್ಲ ಶ್ರೀ ಕೃಷ್ಣ. ಶ್ರೀ ರಾಮಕೃಷ್ಣರ ಹಾಗಿರಲಿಲ್ಲ ರಮಣ ಮಹರ್ಷಿ. ಪ್ರತಿಯೊಂದು ಅವತಾರಕ್ಕೂ ಒಂದು ಉದ್ದೇಶ ಲಕ್ಷ್ಯಗಳಿದೆ. ಅವರು ಅನುಸರಿಸುವ ಮಾರ್ಗವೂ ಬೇರೆ ಬೇರೆಯಾಗಿರುತ್ತದೆ. ಒಬ್ಬರ ಹಾಗೆ ಇನ್ನೊಬ್ಬರು ಮಾಡಬೇಕೆಂದೇನಿಲ್ಲ. ಮಕ್ಕಳೇ, […]