ಪ್ರಶ್ನೆ: ಅಮ್ಮಾ, ನಾನು ಬ್ರಹ್ಮನ್ ಅಲ್ಲವೇ, ಹಾಗಿದ್ದ ಮೇಲೆ ಸಾಧನೆ ಯಾಕೆ ಮಾಡಬೇಕು ? “ಮಗನೇ, ಮಗನ ಹೆಸರು ಕರೆಯದೆ ಮಗನು ಹಿಂತಿರುಗಿ ನೋಡಲು ಸಾಧ್ಯವೇ ? ಆದಕಾರಣ, ನಾವು ನಿಂತಿರುವುದು ನಾಮದ ಮೇಲೆ. ಮಗನೇ, ನಿನಗೆ ನಿನ್ನೆಯಿಲ್ಲವೆ, ಇವತ್ತಿಲ್ಲವೆ, ನಾಳೆಯಿಲ್ಲವೆ, ನನ್ನ ಹೆಂಡತಿಯೆಂದೂ ಮಕ್ಕಳೆಂದೂ ಇಲ್ಲವೆ ? ರುಚಿಯೂ ಅರುಚಿಯೂ ಇಲ್ಲವೆ ? ನೀನು ಬ್ರಹ್ಮನ್ನಲ್ಲಿ ಇರುವವನು ಆದರೂ ಬ್ರಹ್ಮನ್ ಆಗಿಲ್ಲ. ಈಗಿನ ನಿನ್ನ ಬ್ರಹ್ಮನ್ ವಿವೇಚನೆಯಿಲ್ಲದ ಪ್ರಾಣಿಗಳ ಹಾಗೆ. ಅವೆಲ್ಲ ಬ್ರಹ್ಮವೆ ತಾನೆ. ಅದೇ […]
Tag / ಸಾಧನೆ
ಪ್ರಶ್ನೆ: ಸಾಧಕನು ಸಿಟ್ಟಾಗಬಾರದೆಂದು ಹೇಳುವುದು ಏತಕ್ಕಾಗಿ? “ನಲ್ಮೆಯ ಮಕ್ಕಳೇ, ಒಬ್ಬ ಆಧ್ಯಾತ್ಮಿಕ ಜೀವಿಯು ಎಂದೂ ಕೋಪ ಮಾಡಬಾರದು. ಕೋಪವು ನಾವು ಸಾಧನೆಯ ಮೂಲಕ ಗಳಿಸಿದ ಶಕ್ತಿಯನ್ನು ನಷ್ಟಪಡಿಸುವುದು. ಗಾಡಿ ಓಡುತ್ತಿರಬೇಕಾದರೆ ಪೆಟ್ರೋಲ್ ಅಷ್ಟಾಗಿ ಖರ್ಚಾಗುವುದಿಲ್ಲ; ಆದರೆ ಬ್ರೇಕ್ ಅದುಮಿದಾಗ ಹೆಚ್ಚು ಖರ್ಚಾಗುತ್ತದೆ. ಇದೇ ರೀತಿ ಮಕ್ಕಳೇ, ಕೋಪ ಬಂದಾಗ. ಕೋಪ ಬಂದಾಗ ಬರೇ ಬಾಯಿಯಿಂದ ಮಾತ್ರವಲ್ಲ, ಪ್ರತಿಯೊಂದು ರೋಮ ಕೂಪದಿಂದಲೂ ಶಕ್ತಿಯ ವ್ಯಯವಾಗುತ್ತದೆ. ಒಂದು ಸಿಗರೇಟು ಲೈಟರನ್ನೂ ಹತ್ತಿಪ್ಪತ್ತು ಬಾರಿ ಅದುಮಿದರೆ ಅದರ ಪೆಟ್ರೋಲ್ ನಷ್ಟವಾಗುತ್ತದೆ. ಆದರೆ […]
ಪ್ರಶ್ನೆ: ಅಮ್ಮಾ, ಧ್ಯಾನ ಹೇಗೆ ಮಾಡಬೇಕು ? “ಮಕ್ಕಳೇ, ಧ್ಯಾನ ಅಂತ ನಾವು ಹೇಳುವಂತಿಲ್ಲ. ಧ್ಯಾನವೆನ್ನುವುದು ಅಡೆತಡೆಯಿಲ್ಲದೆ ಒಂದೇ ಕಡೆ ಮನಸ್ಸನ್ನು ನಿಲ್ಲಿಸಲು ಸಾಧ್ಯವಾಗುವ ಸ್ಥಿತಿ. ಆ ಸ್ತರ ಮುಟ್ಟಲು ನಾವು ಸಾಧನೆ ಮಾಡುತ್ತಿರುವುದು. ಪಾಯಸ ಮಾಡಲು ನಾವು ನೀರನ್ನು ಒಲೆಯಲ್ಲಿಡುತ್ತೇವೆ. ಏನು ಮಾಡುತ್ತೀಯೆಂದು ಯಾರಾದರೂ ಕೇಳಿದರೆ ಹೇಳುತ್ತೇವೆ ಪಾಯಸ ಮಾಡುತ್ತೇನೆಂದು. ಇದೇ ಪ್ರಕಾರ, ಧ್ಯಾನಾವಸ್ಥೆ ತಲಪಲು ಬೇಕಾದ ಅಭ್ಯಾಸ ಬರೇ ಆರಂಭ ಮಾಡಿರುವುದು ಮಾತ್ರ. ಆದರೂ ನಾವು ಹೇಳುತ್ತೇವೆ ಧ್ಯಾನ ಮಾಡುತ್ತೇವೆಂದು. ಈ ಅಭ್ಯಾಸವನ್ನೇ ಸಾಮಾನ್ಯವಾಗಿ […]