ಒಂದು ಊರಿನಲ್ಲಿ ಒಳ್ಳೆಯವರಾದ ಇಬ್ಬರು ವ್ಯಕ್ತಿಗಳಿದ್ದರೆ ಸಾಕು, ಎಷ್ಟೊ ಜನರನ್ನು ಪರಿವರ್ತಿಸಲು ಸಾಧ್ಯವಿದೆ. ಇವತ್ತಿನ ಎರಡೂ ತಲೆಮಾರುಗಳು ನಶಿಸಿ ಹೋಗುತ್ತಿವೆ. ಯುವಕರು ಹೆಂಡಕ್ಕೂ, ಗಾಂಜಕ್ಕೂ, ಹೆಣ್ಣಿಗೂ ಅಡಿಯಾಳಾಗಿ ಸ್ವತಃ ಅಧೋಗತಿಗಿಳಿದಿದ್ದಾರೆ. ಅವರಿಗೆ ಅದರಲ್ಲಿ ಆನಂದ ದೊರಕುವುದಾದರೆ ಅವುಗಳನ್ನು ಉಪೇಕ್ಷಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಒಂದು ವರ್ಷವೆಲ್ಲ ಸೇದಿದ ನಂತರ ಮುಂದಿನ ವರ್ಷ ಅದರ ಎರಡು ಪಟ್ಟು ಸೇದಬೇಕಾಗುತ್ತದೆ; ಅಂದರೆ ಮಾತ್ರ ಮೊದಲು ಸಿಕ್ಕಿದಷ್ಟು ಆನಂದ ಸಿಗುವುದು. ನಾಲ್ಕೈದು ವರ್ಷಗಳು ಕಳೆದ ಮೇಲೆ ಎಷ್ಟೇ ಸೇದಿದರೂ ಏನೂ ಅನಿಸುವುದಿಲ್ಲ. ಕಡೆಗೆ […]