Tag / ಗುರು

ಒಬ್ಬ ಆಧ್ಯಾತ್ಮಿಕ ಜೀವಿಯು ಜಗತ್ತಿನ ಪೂರ್ಣ ಭಾರಕ್ಕೆ ಹೆಗಲು ಕೊಡಬೇಕಾದವನು. ಅವನು ಎಂದೂ ದುರ್ಬಲನಾಗಬಾರದು; ಚುರುಕಿನ ಸಿಂಹದ ಮರಿಯಾಗಿರಬೇಕು. ____ ಗುರುವಿನಲ್ಲಿ ಪೂರ್ತಿ ವಿಶ್ವಾಸವಿರುವವನು ಗುರುವಿನಲ್ಲಿ ಒಂದು ಪ್ರಶ್ನೆಯನ್ನು ಸಹ ಕೇಳುವುದಿಲ್ಲ. ಗುರು ಹೇಳುವುದನ್ನೇ ಅನುಸರಿಸುವನು. ಅದುವೇ ಗುರುಸೇವೆ. ಶಿಷ್ಯನ ಶ್ರದ್ಧೆಯೊಡಗೂಡಿರುವ ಓಡಾಟ ನೋಡಿದಾಗ ತನಗರಿವಿಲ್ಲದೆಯೆ ಗುರು ಅವನಲ್ಲಿ ಕೃಪೆ ಸುರಿಸುತ್ತಾನೆ. ತಗ್ಗು ನೆಲದಲ್ಲಿ, ನೀರು ತನ್ನಷ್ಟಕ್ಕೆ ಹರಿದು ಸೇರುವ ಹಾಗೆ. ____ ಆಧ್ಯಾತ್ಮಿಕವೂ ಲೌಕಿಕವೂ ಜೊತೆಜೊತೆಯಾಗಿ ಹೋಗಲು ಸಾಧ್ಯವಿದೆ. ಆದರೆ, ಸಂಬಂಧಗಳ ಬಂಧನವಿಲ್ಲದೆ, ನಿಷ್ಕಾಮವಾಗಿ ಕೆಲಸ […]

ನಿಮ್ಮ ದಿನದಲ್ಲಿ ಇಪ್ಪತ್ತನಾಲ್ಕು ಗಂಟೆಗಳಿದೆ. ಒಂದು ಗಂಟೆ ದೈವೀ ವಿಚಾರಗಳಿಗೆ ಮೀಸಲಿಡಿರಿ. ಜೋರಾಗಿ ಅಳುತ್ತ ಅರ್ಧ ಗಂಟೆ ಪ್ರಾರ್ಥನೆ ಮಾಡಿದರೆ ಸಾಕು, ದೇವರ ಕೃಪೆ ನಿಮ್ಮನ್ನು ಬಂದು ತಲಪುವುದು. ಏಕಾಗ್ರತೆ ಬೇಕು; ಭಕ್ತಿ ಬೇಕು. ಈ ಕಲಿಯುಗದಲ್ಲಿ ನಾಮ ಜಪ ಸುಲಭ. ಮನಕರಗುವ ಭಜನೆಯು ಎಷ್ಟೋ ಒಳ್ಳೆಯ ಸಾಧನಾಮಾರ್ಗ. ______________ ತಳಪಾಯ ಚೆನ್ನಾಗಿ ಗಟ್ಟಿಯಾಗಿದ್ದರೆ ಮಾತ್ರವೇ ಕಟ್ಟಡ ಮೇಲೆಬ್ಬಿಸಲು ಸಾಧ್ಯ; ಬಹಳ ಕೆಳಗಿದ್ದರೆ ಮಾತ್ರವೇ ಏರಲು ಸಾಧ್ಯ. ______________ ಕಾಮವನ್ನು ಹೋಗಲಾಡಿಸುವುದು ಬಹಳ, ಬಹಳ ಕಷ್ಟ. ರಾಮನು […]

ಮಕ್ಕಳೇ, ಕಲಿಯುತ್ತಿರುವಕಾಲದಲ್ಲಿ ಹುಡುಗರಿಗೆ ಲಕ್ಷ್ಯಬೋಧವಿದ್ದರೂ ಅವರ ಮನಸ್ಸು ಹೆಚ್ಚಾಗಿ ಆಟಗಳಲ್ಲೂ, ಇನ್ನಿತರ ಆಮೋದ ಪ್ರಮೋದಗಳಲ್ಲೂ ಇರುತ್ತದೆ. ಆ ಕಾಲಘಟ್ಟದಲ್ಲಿ ತಂದೆಯೂ ತಾಯಿಯೂ ಬೈತಾರೆ. ಓದಿಕೊಂಡು ಹೋಗದಿದ್ದರೆ ಸರ್ ಹೊಡೆಯುತ್ತಾರಂತ ಹೆದರಿಕೆಯಿಂದ ಮಾತ್ರವೇ ಅವರು ಕಲಿಯುವುದು. ಆದರೆ ಹತ್ತನೇ ಕ್ಲಾಸ್ ಪಾಸಾದ ಮೇಲೆ, “ನನಗೆ ಎಂ.ಬಿ.ಬಿ.ಎಸ್.ಗೆ ಹೋಗಬೇಕು, ರ‍್ಯಾಂಕ್ ತೆಗೆದು ಪಾಸಾಗಬೇಕು” ಎಂಬ ಪರಿಜ್ಞಾನ ಬರುವುದು. ಆಗ ಅವರು ಚೆನ್ನಾಗಿ ಓದುತ್ತಾರೆ. ಯಾರು ಬಯ್ಯದೆಯೂ ಹೊಡೆಯದೆಯೂ ವಿದ್ಯಾಭ್ಯಾಸಕ್ಕೆ ಗಮನಕೊಡುತ್ತಾರೆ. ಸಿನೆಮ ನೋಡಲು ಹೋಗುವುದಿಲ್ಲ; ಹೆಚ್ಚು ನಿದ್ದೆ ಮಾಡುವುದಿಲ್ಲ. ಆದರೆ […]