ಪ್ರಶ್ನೆ: ತಪಸ್ಸಿನಿಂದ ಶಕ್ತಿ ಹೇಗೆ ಉಂಟಾಗುತ್ತದೆ ? “ಒಂಬತ್ತು ಕವಲುಗಳಿರುವ ಒಂದು ನದಿಯಿದೆ. ಅದರ ಪ್ರವಾಹಕ್ಕೆ ಬಲವಿಲ್ಲ. ಆದರೆ ಆ ಒಂಬತ್ತು ಕವಲುಗಳನ್ನು ಮುಚ್ಚಿ ನದಿಯಲ್ಲಿ ಮಾತ್ರ ನೀರು ಹರಿಯಲು ಬಿಟ್ಟರೆ, ಪ್ರವಾಹ ಶಕ್ತಿಶಾಲಿಯಾಗುತ್ತದೆ. ಆ ಶಕ್ತಿಯಿಂದಲೇ ಕರೆಂಟ್ ಉತ್ಪಾದಿಸುತ್ತಾರೆ. ಇದೇ ತರ ನಿಮ್ಮ ಆಲೋಚನೆಗಳನ್ನು, ಬಹುಮುಖವಾಗಿ ಹಾರುವ ಮನಸ್ಸನ್ನು, ಏಕತ್ವದಲ್ಲಿ ಕೇಂದ್ರೀಕರಿಸಿದರೆ, ನಿಮ್ಮಲ್ಲಿ ನಿಶ್ಚಯವಾಗಿಯೂ ಈ ಶಕ್ತಿ ಉಂಟಾಗುತ್ತದೆ. ಇತರರಿಗೆ ಶರೀರ ಮೂಲಕವೂ, ಮನಸ್ಸು ಮೂಲಕವೂ, ಬುದ್ಧಿ ಮೂಲಕವೂ, ಪ್ರವೃತ್ತಿ ಮೂಲಕವೂ, ಮಾತು ಮೂಲಕವೂ, ಈ […]